ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ-ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.