ಕಳೆದ ಐದು ವರ್ಷಗಳಿಂದ ನೇಮಕಾತಿ ಹಗರಣ, ವಿವಾದದಲ್ಲೇ ಮುಳುಗಿ ತಿಂಗಳ ಹಿಂದಷ್ಟೇ ಪ್ರಾರಂಭವಾಗಿದ್ದ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮತ್ತೆ ತಡೆಯಾಜ್ಞೆ ನೀಡಿದೆ.
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ವಿಧಿಸಿದ್ದ ಅಂತಿಮ ಗಡುವು ಹತ್ತಿರವಾಗುತ್ತಿದೆ. ಇನ್ನು ಕೇವಲ ಮೂರು ದಿನಗಳ ಸಮೀಕ್ಷೆ ಬಾಕಿಯಿದ್ದು, ಶನಿವಾರದ ವೇಳೆಗೆ ಶೇ.71.31 ಕುಟುಂಬಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ.
ಕಳೆದ ಸೆ.2ರಂದು ಬಿಬಿಎಂಪಿ ವಿಸರ್ಜನೆಯಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ರಚನೆಯಾದ ಐದು ನಗರ ಪಾಲಿಕೆಯ ಅಧಿಕಾರಿ-ಸಿಬ್ಬಂದಿಗೆ ಸೆಪ್ಟೆಂಬರ್ ವೇತನ (ಜಿಬಿಎ ರಚನೆಯಾದ ಮೊದಲ ತಿಂಗಳು) ಪಾವತಿಯಾಗಿಲ್ಲ.