‘ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾರಾಮಯ್ಯ ಅವರೇ ಕಾರಣವೇ? ನಾವೇ ಎಲ್ಲದಕ್ಕೂ ಹೊಣೆಯೇ? ನಮ್ಮ ಬಗ್ಗೆ ಮಾತನಾಡುವ ಬದಲು ಮೊದಲು ಈ ನೆಲದ ಹೆಣ್ಣು ಮಕ್ಕಳಿಗೆ ಆಗಿರುವ ಅವಮಾನದ ಬಗ್ಗೆ ಉತ್ತರ ಕೊಡಲಿ’ ಎಂದ ಉಪಮುಖ್ಯಮಂತ್ರಿ
2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕ್ವಿಂಟಲ್‌ಗೆ 420 ರು.ನಷ್ಟು ಹೆಚ್ಚಿಸಲಾಗಿದ್ದು, 12,100 ರು.ಗೆ ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಇದಕ್ಕಾಗಿ 855 ಕೋಟಿ ರು. ತೆಗೆದಿರಿಸಲಾಗಿದೆ.
ರಾಜ್ಯದ ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ನದಿಗಳು ಕಲುಷಿತಗೊಂಡಿದ್ದು, ಅವುಗಳ ನೀರು ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮ ಮೆಟ್ರೋ ನೇರಳೆ ಮಾರ್ಗಕ್ಕಾಗಿ ಚೀನಾದಿಂದ ಪ್ರೊಟೋಟೈಪ್ ರೈಲು ಜನವರಿ 10ರ ವೇಳೆಗೆ ಪೀಣ್ಯ ಡಿಪೋ ತಲುಪಲಿದ್ದು, ಕೆಲ ದಿನಗಳ ಕಾಲ ವಿವಿಧ ತಪಾಸಣೆಗೆ ಒಳಪಟ್ಟು ಬಳಿಕ ಹಳಿಗಿಳಿಯಲಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣದ ಅವ್ಯವಹಾರ ಹಗರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸದ ರಾಜ್ಯ ಸಿಐಡಿ ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ತನಿಖೆಯನ್ನು ಸಿಬಿಐಗೆ ಏಕೆ ವಹಿಸಬಾರದು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.