ಅಂತಾರಾಷ್ಟ್ರೀಯ ಸವಾಲುಗಳನ್ನು ಎದುರಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಿಹಾರದ ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರು ಪದವೀಧರರಿಗೆ ಸಲಹೆ ನೀಡಿದರು.
ಬೆಂಗಳೂರು ನಗರ ಕಮೀಷನರ್ ವ್ಯಾಪ್ತಿ ವಿಸ್ತಾರವಾಗಿದ್ದು, ಹೊಸದಾಗಿ ಮೂರು ಡಿಸಿಪಿ ವಿಭಾಗಗಳನ್ನು ರಚಿಸಿ ಪೊಲೀಸ್ ಇಲಾಖೆ ಬುಧವಾರ ಆದೇಶಿಸಿದೆ.
ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಪತ್ತೆ ಮಾಡಿ ತ್ವರಿತವಾಗಿ ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿಯು ನೀಡಲಾದ ವಿನಾಯಿತಿಯನ್ನು ದುರುಪಯೋಗಪಡಿಸಿಕೊಂಡು ಘನತ್ಯಾಜ್ಯ ಶುಲ್ಕ ಪಾವತಿಸದೇ ವಂಚಿಸುತ್ತಿರುವುದು ಕಂಡು ಬರುತ್ತಿದೆ.
ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಸಲ್ಲಿಸಿರುವ ಮಧ್ಯಂತರ ಮನವಿ ಕುರಿತು ಗುರುವಾರ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೈಕೋರ್ಟ್ ತಿಳಿಸಿದೆ.
ಬೇಸಿಗೆಯಲ್ಲಿ ಕೇಜಿಗೆ 100 ರು.ವರೆಗೆ ಮಾರಾಟ ಆಗುತ್ತಿದ್ದ ಮಾವಿನ ಹಣ್ಣಿನ ದರ ಈಗ ಕೆ.ಜಿ.ಗೆ 3-4 ರು.ಗೆ (ಒಂದು ಟನ್‌ಗೆ ಮಾವಿನ ಬೆಲೆ 3 ರಿಂದ 4 ಸಾವಿರ ರು.ಗೆ) ಕುಸಿದಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬುಧವಾರ ಕಾಂಗ್ರೆಸ್ಸಿನ ಐವರು ಶಾಸಕರು ಹಾಗೂ ಬಳ್ಳಾರಿ ಸಂಸದ ಈ.ತುಕಾರಾಂ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಭಾರಿ ಶಾಕ್
ಆಹಾರ ಬೆಳೆಯುವುದರ ಜೊತೆಗೇ ರೈತರನ್ನೇ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿ, ಉದ್ಯಮಿಗಳಾಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವು ಜಂಟಿಯಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ ಜಾರಿಗೆ ತರಲು ಮುಂದಾಗಿದೆ.
ಒಂದೂವರೆ ತಿಂಗಳು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮಾಡಿ 4.70 ಕೋಟಿ ರು. ದೋಚಿದ್ದ ಸೈಬರ್ ವಂಚಕರ ತಂಡದ ಇಬ್ಬರು ಕಿಡಿಗೇಡಿಗಳನ್ನು ಆಗ್ನೇಯ ವಿಭಾಗದ ಸಿಇನ್ ಪೊಲೀಸರು ಬಂಧಿಸಿದ್ದಾರೆ.