ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣಕ್ಕೆ ಕಿಕ್ಬ್ಯಾಕ್ ಆರೋಪ ಬಂದಿದ್ದು, ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮಕ್ಕೆ ಉತ್ತರ ನೀಡಬೇಕು ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
:ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ.
ಯುರೋಪಿಯನ್ ರಾಷ್ಟ್ರಗಳಲ್ಲಿರುವಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಇ-ಆರ್ಟಿ) ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಜಾತಿವಾರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಬಹಿರಂಗವಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಾತಿ ಎಂದರೆ ಅದು ಮುಸ್ಲಿಮರು. ರಾಜ್ಯದಲ್ಲಿ ಬರೋಬ್ಬರಿ 75.25 ಲಕ್ಷ ಮಂದಿ ಮುಸ್ಲಿಮರಿದ್ದಾರೆ.
ಉತ್ತರ ಕರ್ನಾಟಕದ ಕೈಮಗ್ಗ ಪರಂಪರೆಯ ಸಂಕೇತವಾಗಿರುವ ‘ಪಟ್ಟೇದ ಅಂಚು’ ಸೀರೆಗೆ ಭೌಗೋಳಿಕ ಗುರುತು (ಜಿಐ ಟ್ಯಾಗ್) ನೀಡಲಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಅಡಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ), 7 ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ವಿ ಹೆಸರಿನ ಹೊಸ ಇಂಗ್ಲಿಷ್ ಪುಸ್ತಕ ಪರಿಚಯಿಸಿದೆ. ಅದರಲ್ಲಿ ಕರ್ನಾಟಕದ ರಾಣಿ ಅಬ್ಬಕ್ಕಳ ಗ್ರಾಫಿಕ್ ಕಥೆಗಳನ್ನು ಸೇರಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಅದರ ಮುಖ್ಯಸ್ಥರು ಹಾಗೂ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ.ಸಮೀರ್ ಅವರಿಂದ 10 ಕೋಟಿ ರು. ಪರಿಹಾರ ಕೊಡಿಸಲು ಕೋರಿ ಸಿವಿಲ್ ಕೋರ್ಟ್ಗೆ ದಾವೆ ಸಲ್ಲಿಸಲಾಗಿದೆ.