ಮುತ್ತಪ್ಪ ರೈ ಪುತ್ರನ ಮೇಲಿನ ದಾಳಿ ಅಸಲಿಯೋ? ನಕಲಿಯೋಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸ್ವಯಂ ದಾಳಿ ಮಾಡಿಸಿಕೊಂಡಿರಬಹುದೇ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ ಅವರು ರಿಕ್ಕಿ ರೈ ಅವರೇ ಖುದ್ದಾಗಿ ದಾಳಿ ಮಾಡಿಸಿಕೊಂಡಿದ್ದಾರೆ ಎಂಬುದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಶೂಟೌಟ್ ಅಸಲಿಯೋ- ನಕಲಿಯೋ ಎಂಬ ಜಿಜ್ಞಾಸೆ ಶುರುವಾಗಿದೆ.