ಜಿಲ್ಲಾಧಿಕಾರಿ ಭರವಸೆ: ಅನಿರ್ದಿಷ್ಟಾವಧಿ ಹೋರಾಟಕ್ಕೆ ಬ್ರೇಕ್ದೊಡ್ಡಬಳ್ಳಾಪುರ: ತಾಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ, ಆಡಳಿತ ವೈಫಲ್ಯ ಸರಿಪಡಿಸುವಂತೆ ಒತ್ತಾಯಿಸಿ ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಸಿಪಿಐ(ಎಂ), ವಿವಿಧ ದಲಿತ ಸಂಘಟನೆಗಳು ಪ್ರಾರಂಭಿಸಿದ್ದ ಜಿಲ್ಲಾ ಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಗುರುವಾರ ಪ್ರಕಟಿಸಲಾಗಿದೆ.