ನಿಗದಿತ ಅವಧಿಯಲ್ಲಿ ಡಿಮಾಂಡ್ ಡ್ರಾಫ್ಟ್ (ಡಿಡಿ) ಬ್ಯಾಂಕ್‌ಗೆ ಸಲ್ಲಿಸದೇ ಇದ್ದಾಗ ಆ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರು ಪಾವತಿಯಾಗುವಂತೆ ಮಾರ್ಗಸೂಚಿ ರೂಪಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್‌ಗೆ (ಆರ್‌ಬಿಐ) ಹೈಕೋರ್ಟ್ ನಿರ್ದೇಶಿಸಿದೆ.
ಚಿಲ್ಲರೆ ಕಾಸಿಗಾಗಿ ಯುವಕನನ್ನು ಅಪಹರಿಸಿ, ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಶೋಕಾಸ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿದ ಆರು ಮಂದಿ ಆರೋಪಿಗಳ ಬಂಧನಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ಅಧಿಕಾರಿಗಳು ಗುರುವಾರ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ 16ಕ್ಕೂ ಅಧಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಸ್ಥಳೀಯ ಪೊಲೀಸರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ
ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಸ್ವತಾಲೀಮು ಫೌಂಡೇಷನ್ ಸಹಯೋಗದಲ್ಲಿ ಕಸ್ತೂರಬಾ ಗಾಂಧಿ ಕಲಿಕಾ ವಿದ್ಯಾಲಯಗಳು ಮತ್ತು ಕರ್ನಾಟಕ ಕಸ್ತೂರಬಾ ಗಾಂಧಿ ಕಲಿಕಾ ವಿದ್ಯಾಲಯಗಳ ಬಾಲಕಿಯರ ಶೈಕ್ಷಣಿಕ ಪ್ರಗತಿಗಾಗಿ ರೂಪಿಸಿರುವ ‘ಗೆಳತಿಯರೊಂದಿಗೆ ಹಾರೋಣ’ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಅರಣ್ಯ ಒತ್ತುವರಿಯಾಗುವುದನ್ನು ತಡೆಯಲು ಉಪಗ್ರಹ ಕಣ್ಗಾವಲು ವ್ಯವಸ್ಥೆ ‘ಅರಣ್ಯ ಹೊದಿಕೆ ಬದಲಾವಣೆ ಮುನ್ನೆಚ್ಚರಿಕೆ ವ್ಯವಸ್ಥೆ’ಯನ್ನು ಸಮರ್ಪಕವಾಗಿ ಬಳಸಿಕೊಂಡು, ಒತ್ತುವರಿ ತಡೆ ಹಾಗೂ ಒತ್ತುವರಿದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದರು.
ರಾಜ್ಯದಲ್ಲಿ ಭುಗಿಲೆದ್ದ ವಕ್ಫ್ ಭೂ ಕಬಳಿಕೆ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಪ್ರವಾಸದ ಮೂಲಕ ಸಂಗ್ರಹಿಸಿದ ಸುಮಾರು 2500 ದಾಖಲಾತಿಗಳ ವರದಿಯನ್ನು ಕೇಂದ್ರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧಿಕಾರಿಗಳಿಗೆ ಸಲ್ಲಿಸಲಾಗಿದೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನಮ್ಮ ಮೆಟ್ರೋದ ಮುಂಬರುವ ನೀಲಿ ಮಾರ್ಗವನ್ನು ಎರಡು ಹಂತದಲ್ಲಿ ವಾಣಿಜ್ಯ ಸೇವೆಗೆ ಮುಕ್ತಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಯೋಜಿಸಿದೆ.
ಬೆಂಗಳೂರು ಜಲಮಂಡಳಿಯು ಹೊಸ ಸಂಪರ್ಕ ಪಡೆಯುವುದನ್ನು ಸರಳ ಹಾಗೂ ಸುಲಭ ಮಾಡಲು ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾದರಿಯಲ್ಲಿ ಮಿಸ್ ಕಾಲ್ ವ್ಯವಸ್ಥೆ ಜಾರಿಗೆ ತರುವುದಕ್ಕೆ ಮುಂದಾಗಿದೆ!