ಚಾಮರಾಜಪೇಟೆಯಲ್ಲಿ ಈಚೆಗೆ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಪಂಜುರ್ಲಿ ದೈವದ ಪಾತ್ರ ರೂಪಿಸಿ ಸಚಿವ ಜಮೀರ್ ಅಹ್ಮದ್ ಅವರನ್ನು ವೇದಿಕೆಗೆ ಕರೆತರುವ ಕಾರ್ಯಕ್ರಮ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಗುತ್ತಿಗೆ ನೌಕರ ಸೇರಿದ ಎಂಟು ಆರೋಪಿಗಳನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಏಡ್ಸ್ ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. 2014ರಲ್ಲಿ ಒಟ್ಟಾರೆ ತಪಾಸಣೆಯ ಶೇ.1.77ರಷ್ಟು ಇದ್ದ ಸೋಂಕಿನ ಪ್ರಮಾಣ, 2024-25ರಲ್ಲಿ ಶೇ.0.33ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಡಾ। ಎಚ್.ಎಲ್.ನಾಗರಾಜು ಮತ್ತೆ ಸನ್ಯಾಸ ದೀಕ್ಷೆ ಪಡೆದು ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಕೇಳಿಬರುತ್ತಿದೆ.