ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಆರ್ಥಿಕ ಸಮೀಕ್ಷೆ (ಜಾತಿಗಣತಿ)ಯ ಅಂತಿಮ ವರದಿ ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡನೆಯಾಗಿದ್ದು, ಬರೋಬ್ಬರಿ 50 ಸಂಪುಟಗಳುಳ್ಳ ವರದಿಯ ಮುಖ್ಯಾಂಶಗಳನ್ನು ಸಚಿವರಿಗೆ ವಿವರಿಸಲಾಗಿದೆ.
ನಮ್ಮ ಸರ್ಕಾರ ನ್ಯಾಯಬದ್ಧವಾಗಿ ಆಡಳಿತ ನೀಡುತ್ತಿದೆ. ನಾವು ಯಾವುದೇ ಲಂಚಕ್ಕೆ ಪ್ರೋತ್ಸಾಹ ನೀಡುವವರಲ್ಲ. ಗುತ್ತಿಗೆದಾರರಿಗೆ ಹಣ ಬಿಡುಗಡೆಗೆ ಯಾರಾದರೂ ಲಂಚ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಖಾಸಗಿ ಶಾಲೆಗಳು 2025-26ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿದ್ದು, ಬಹಳಷ್ಟು ಅನುದಾನರಹಿತ ಶಾಲೆಗಳು ಶೇಕಡ 15ರಿಂದ 20ರಷ್ಟು ಪ್ರವೇಶ ಶುಲ್ಕ ಹೆಚ್ಚಿಸಿವೆ. ಇದರಿಂದ ಪೋಷಕರಿಗೆ ಕಳೆದಬಾರಿಗಿಂತ ಹೆಚ್ಚಿನ ಶುಲ್ಕದ ಹೊರೆಬಿದ್ದಿದೆ.
ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಸಚಿವರ ಕುಟುಂಬಸ್ಥರು, ಮಧ್ಯವರ್ತಿಗಳು ಹಾಗೂ ಕಾಣದ ಕೈಗಳ ಕೈವಾಡ ಹೆಚ್ಚಳ
166 ಜನರನ್ನು ಬಲಿ ಪಡೆದ 2008ರ ಮುಂಬೈ ಸರಣಿ ದಾಳಿ ಪ್ರಕರಣದ ಮಾಸ್ಟರ್ಮೈಂಡ್ ತಹಾವ್ವುರ್ ರಾಣಾ (64) ಕೊನೆಗೂ ಅಮೆರಿಕದಿಂದ ಗಡೀಪಾರಾಗಿ ಭಾರತಕ್ಕೆ ಬಂದಿಳಿದಿದ್ದಾನೆ.