ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಹೋಟೆಲ್ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಶ್ಲಾಘಿಸಿದರು.
ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನುಮ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆಯಾಚಿಸುವಂತೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್‌ಗೆ ಹೈಕೋರ್ಟ್ ತಾಕೀತು ಮಾಡಿದೆ.
ಬಿಬಿಎಂಪಿಯ ಮಳೆಗಾಲದ ಸಿದ್ಧತೆಯ ವಾಸ್ತವವನ್ನು ಮೇ ತಿಂಗಳ ಬೇಸಿಗೆ ಕಾಲದ ಮಳೆಯೇ ಬಟಾ ಬಯಲು ಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜಲಸಾರಿಗೆ ಶುರುವಾಗಿದ್ದು, ಪ್ರಾಣಾಪಾಯ ನಷ್ಟ-ಕಷ್ಟಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನಿ ಎಂದಿರುವ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ ದೂರು ನೀಡಲು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರು ನಿರ್ಧರಿಸಿದ್ದಾರೆ.
ಮಳೆಪೀಡಿತ ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಹಾನಿಗೊಳಗಾಗದವರಿಗೆ ತುರ್ತು ಪರಿಹಾರಕ್ಕೆ ತಕ್ಷಣ ಒಂದು ಸಾವಿರ ಕೋಟಿ ರು. ಅನುದಾನ ಬಿಡುಗಡೆಗೊಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳಭಾಗದಲ್ಲಿ ಮಳೆ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕೆಲವೆಡೆ ಅಣೆಕಟ್ಟೆಗಳು ತುಂಬಿವೆ. ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ್ದಾರೆ.
‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಜೂ.1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಕುರಿತು ನಗರದ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೇ 30ರಂದು ಆದೇಶ ನೀಡಲಿದೆ.