‘ಧನಂಜಯ್ ನನ್ನ ತಮ್ಮ, ಅವರ ಮೇಲೆ ಅಪಾರ ಗೌರವವಿದೆ. ಅವರು ತಾನು ಬೆಳೆಯುವುದರ ಜೊತೆ ತನ್ನವರನ್ನು ಕೂಡ ಬೆಳೆಸುತ್ತಾರೆ. ಅವರ ದಾರಿ, ಅವರ ಕಷ್ಟ, ಅವರ ಮನಸ್ಸು ಎಲ್ಲವೂ ನನಗಿಷ್ಟ - ದುನಿಯಾ ವಿಜಯ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಇದೀಗ ಸ್ವತಃ ಅವರ ಪುತ್ರ ಶ್ರವಣ್ ತನ್ನ ಸಹಿ ನಕಲು ಮಾಡಿದ ಆರೋಪ ಸಂಬಂಧ ದೂರು ಸಲ್ಲಿಸಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವ ಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಸಂತೋಷ್ ಲಾಡ್, ಮಧು ಬಂಗಾರಪ್ಪ ಸಮರ್ಥಿಸಿಕೊಂಡಿದ್ದು, ಬಡತನ ರೇಖೆಗಿಂತ ಕೆಳಗಿರುವವರು ಆತಂಕ ಪಡಬೇಕಿಲ್ಲ. ಅಂತಹ ಅರ್ಹರ ಕಾರ್ಡುಗಳು ರದ್ದಾಗುವುದಿಲ್ಲ ಎಂದು ಹೇಳಿದ್ದಾರೆ.
ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್ ಜಾರಿಗೆ ನಿರಾಕರಿಸಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಬೆಳ್ತಗಂಡಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.