ಮಹಾನಗರ (ಮೆಟ್ರೋಪಾಲಿಟನ್), ನಗರ ಪಾಲಿಕೆ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಪಂ ಸೇರಿ ಇತರೆ ಪ್ರದೇಶಗಳಲ್ಲಿ ನ್ಯಾಯ ಬೆಲೆ ಅಂಗಡಿ ತೆರೆಯಲು ಯಾವುದು ‘ಸೂಕ್ತ ವ್ಯಾಪಾರ ಸ್ಥಳ’ ಎಂಬ ಬಗ್ಗೆ ಮಾರ್ಗಸೂಚಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
‘ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್’ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಶೀಘ್ರದಲ್ಲೇ ಜಾರಿಗೆ ತರಲಿದೆ. ಅದರಂತೆ ಕರ್ನಾಟಕದಲ್ಲಿ ಈಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ವಿಲೀನಗೊಂಡು ಒಂದೇ ಆಗಲಿವೆ.