ಕೆಇಆರ್‌ಸಿ ಆದೇಶದ ಬೆನ್ನಲ್ಲೇ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್ ಸಂಪರ್ಕ ನೀಡಬಾರದು.
ಸಾವಿಗೀಡಾಗುವ ನವಜಾತ ಶಿಶುಗಳ ತಾಯಂದಿರ ಮರಣ ಪ್ರಮಾಣ ಇಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂಥ ಸಾವಿನ ಪ್ರಮಾಣ ಶೂನ್ಯಕ್ಕಿಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏ.11ರಿಂದ ಮೌಲ್ಯಮಾಪನ ಪ್ರಕ್ರಿಯೆ ಕಾರ್ಯಗಳು ಶುರುವಾಗಲಿವೆ. ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐನ ನೂರಾರು ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದವರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ವಕ್ಫ್ ಮಸೂದೆ ಅಸಂವಿಧಾನಿಕ.
ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗದ ಹಿನ್ನೆಲೆಯಲ್ಲಿ ಎಸ್ಕಾಂಗಳು ಅನಿಯಮಿತ ವಿದ್ಯುತ್ ಕಡಿತದ ಮೊರೆ ಹೋಗಿವೆ. ಪರಿಣಾಮ ರಾಜ್ಯಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಶುರುವಾಗಿದೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್‌ನೋಟ್ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.