ಬಿಎಂಸಿಆರ್‌ಐ ಅಧೀನ ಆಸ್ಪತ್ರೆಗಳಲ್ಲಿ ದರ ಏರಿಕೆಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಅಧೀನದ ಆಸ್ಪತ್ರೆಗಳಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಶುಲ್ಕ, ಪ್ರಮಾಣಪತ್ರ ನೀಡುವ ದರವನ್ನು ಶೇಕಡ 20ರಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದೆ ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಹ ಶುಲ್ಕ ಪರಿಷ್ಕರಣೆ ಆಗುವ ಸಾಧ್ಯತೆಯಿದೆ ಎಂಬ ಸುಳಿವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿದ್ದಾರೆ.