ಕೂಡಲೇ ಬಗರ್‌ಹುಕುಂ ಸಾಗುವಳಿ ಚೀಟಿ ವಿತರಿಸಿದೊಡ್ಡಬಳ್ಳಾಪುರ: ಪೂರ್ವಿಕರ ಕಾಲದಿಂದಲೂ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು, ಅಕ್ರಮ- ಸಕ್ರಮಕ್ಕಾಗಿ ನಮೂನೆ 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಆದರೆ ಸಾಗುವಳಿ ಚೀಟಿ ವಿತರಣೆಗೆ ಶಾಸಕರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಜಿಲ್ಲಾ ಸಂಚಾಲಕಿ ನಾಗರತ್ನ ಆರೋಪಿಸಿದರು.