ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಆಂತರಿಕ ಆದಾಯದಲ್ಲೇ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಹಸ್ತಪ್ರತಿಗಳ ಡಿಜಿಟಲೀಕರಣ, ಭಾಷಾಂತರ, ಪ್ರಕಟಣೆ ಸೇರಿ ಮಾಡಬೇಕಾದ ಕಾರ್ಯಗಳು ಇನ್ನೂ ಸಾಕಷ್ಟಿದೆ. ಆದರೆ, ಇದಕ್ಕೆಲ್ಲ ಸಾಕಷ್ಟು ಅನುದಾನವಿಲ್ಲದೆ ಸೊರಗುತ್ತಿದೆ.
ಓಲಾ, ಉಬರ್ ಮತ್ತು ರ‍್ಯಾಪಿಡೋ ಸಂಸ್ಥೆಗಳು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಬುಧವಾರ ಮಹತ್ವದ ಆದೇಶ ಮಾಡಿದೆ.
ರಾಜ್ಯದಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 60-72 ಸಾವಿರಕ್ಕೆ ಏರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್‌ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು.
ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ (ಬಿಐಎಎಲ್) ತನ್ನ ಅಂತರ್ಜಾಲದಲ್ಲಿ ಆಂಗ್ಲ ಭಾಷೆಯ ಜತೆಗೆ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಿದೆ.
ಅಧೀನ ನ್ಯಾಯಾಲಯದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಶಿಕ್ಷೆ ಪ್ರಮಾಣ ಕಡಿಮೆಗೊಳಿಸಲು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಅನುಮತಿಸಿದೆ.
ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಏಳು ಪಂದ್ಯಗಳ ವೀಕ್ಷಿಸಲು ಬರುವವರಿಗೆ ‘ನಮ್ಮ ಮೆಟ್ರೋ’ ತಡರಾತ್ರಿ 12.30ರವರೆಗೆ ರೈಲು ಸೇವೆ ವಿಸ್ತರಿಸುವುದಾಗಿ ಬಿಎಂಆರ್‌ಸಿಎಲ್ ತಿಳಿಸಿದೆ.
ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.