ಮಧುಮೇಹ ಜಾಗೃತಿ ಅಗತ್ಯ: ಡಾ. ರಾಘವೇಂದ್ರದೊಡ್ಡಬಳ್ಳಾಪುರ: ಒತ್ತಡದ ಬದುಕು, ದೈಹಿಕ ಚಟುವಟಿಕೆ ಇಲ್ಲದಿರುವುದು, ಅನಿಯಮಿತ ಆಹಾರ ಪದ್ಧತಿಯಿಂದ ಮಧುಮೇಹ ಬರಲು ಕಾರಣವಾಗಿವೆ. ಇತರೆ ಕಾಯಿಲೆಗಳಿಗೂ ಕಾರಣವಾಗಿರುವ ಮಧುಮೇಹದ ಜಾಗೃತಿ ಮೂಡಿಸಿ, ರೋಗ ನಿಯಂತ್ರಣದ ಅಂಶಗಳನ್ನು ತಿಳಿಸುವ ಸಲುವಾಗಿ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕು ಘಟಕದ ಕಾರ್ಯದರ್ಶಿ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು.