ಭೂ ಸುಧಾರಣೆ ನೀತಿಯಡಿ ರೈತರಿಗೆ ಬಂದಿರುವ ವಕ್ಫ್ ಆಸ್ತಿಯನ್ನು ತೆರವುಗೊಳಿಸದೆ, ಅಕ್ರಮವಾಗಿ ಒತ್ತುವರಿಗೆ ಗುರಿಯಾಗಿರುವ ವಕ್ಫ್ ಆಸ್ತಿಯನ್ನು ಸಂರಕ್ಷಿಸಲು ಅಧಿಸೂಚನೆ ಹೊರಡಿಸುವ ಮೂಲಕ ವಕ್ಫ್ ಆಸ್ತಿ ವಿವಾದ ಇತ್ಯರ್ಥಪಡಿಸಲು ಸರ್ಕಾರ ಚಿಂತನೆ ನಡೆಸಿದೆ.
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ‘ಸ್ವಚ್ಛ ಅಬಕಾರಿ ಅಭಿಯಾನ’ದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ‘ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ’ ಕರೆ ನೀಡಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ 36ಕ್ಕೂ ಹೆಚ್ಚು ವೈದ್ಯಾಧಿಕಾರಿಗಳು ಅರ್ಹತೆ ಇಲ್ಲದಿದ್ದರೂ ವಿಶೇಷ ಭತ್ಯೆಯಾಗಿ ₹3.50 ಕೋಟಿಗೂ ಅಧಿಕ ಮೊತ್ತವನ್ನು ಪಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ್ದ ಆದೇಶವನ್ನು ಹೈಕೋರ್ಟ್ ಅಮಾನತ್ತಿನಲ್ಲಿರಿಸಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ವಕ್ಫ್ ಆಸ್ತಿ ವಿವಾದ ಹಾಗೂ ಗುತ್ತಿಗೆಗಳಲ್ಲಿ ಮುಸ್ಲಿಂ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಹೊಂದಿರಬೇಕಾಗಿದ್ದ ಷರತ್ತು ಸಡಿಲಿಕೆ ಮಾಡುವ ವಿಧೇಯಕವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸರ್ಕಾರ ಸಜ್ಜಾಗಿದೆ.