ಸಿಎಂ ವಿರುದ್ಧ ಗವರ್ನರ್ಗೆ ಮತ್ತೊಂದು ದೂರು ಸಲ್ಲಿಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿ ಎಂಟು ಕಂಪೆನಿಗಳ ಗಣಿ ಗುತ್ತಿಗೆ ನವೀಕರಣಕ್ಕೆ ಅನುಮೋದನೆ ನೀಡಿ 500 ಕೋಟಿ ರು. ಕಿಕ್ ಬ್ಯಾಕ್ ಪಡೆದಿದ್ದು, ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರು. ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ದೂರು ಸಲ್ಲಿಕೆಯಾಗಿದೆ.