ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸುವುದಕ್ಕೆ ಯೋಜನೆ ರೂಪಿಸಿದ್ದು, ಅದಕ್ಕಾಗಿ 1 .80 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ. ಆಧುನಿಕ ಹಾಗೂ ಡಿಜಿಟಲ್ ತಂತ್ರಜ್ಞಾನದೊಂದಿಗೆ ಕಲಿಕೆ ನೀಡುವ ಉದ್ದೇಶದಿಂದ 2020-21ನೇ ಸಾಲಿನಿಂದ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ.
ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ.
ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಕೊರೋನಾ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಪಿಪಿಇ ಕಿಟ್‌ಗಳ ಖರೀದಿಯಲ್ಲಿ 14.21 ಕೋಟಿ ರು. ಭ್ರಷ್ಟಾಚಾರ ಎಸಗಿರುವುದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸುವಂತೆ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಆಯೋಗ ಶಿಫಾರಸು ಮಾಡಿದೆ.
2025ರ ಗ್ರಾಮಿ ಪ್ರಶಸ್ತಿಗೆ ರಿಕಿ ಕೇಜ್, ವಾರಿಜಾಶ್ರೀ ವೇಣುಗೋಪಾಲ್, ಅನೌಷ್ಕಾ ಶಂಕರ್, ರಾಧಿಕಾ ವೆಕಾರಿಯಾ ಮತ್ತು ಚಂದ್ರಿಕಾ ಟಂಡನ್ ನಾಮನಿರ್ದೇಶನಗೊಂಡಿದ್ದಾರೆ. ಇವರುಗಳಲ್ಲಿ ರಿಕಿ ಕೇಜ್ ಮತ್ತು ವಾರಿಜಾ ಶ್ರೀ ಅವರು ಕನ್ನಡಿಗರು ಎಂಬುದು ವಿಶೇಷ.
ನ.20ರಂದು ರಾಜ್ಯಾದ್ಯಂತ ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿಕೆ ನೀಡಿದವರು ನಮ್ಮ ಒಕ್ಕೂಟದ ಸದಸ್ಯರಲ್ಲ. ಅವರಿಗೂ ನಮಗೂ ಸಂಬಂಧವಿಲ್ಲ. ಬಂದ್ ನಡೆಸುವುದು ನಿಶ್ಚಿತ ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕ ಸ್ಪಷ್ಟಪಡಿಸಿದೆ.
ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.