ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.
ಕ್ವಿನ್ (ಕೆಡಬ್ಲ್ಯುಐಎನ್) ಸಿಟಿ ನಿರ್ಮಾಣಕ್ಕೆ ಆರಂಭಿಕ ಪ್ರಕ್ರಿಯೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಚಾಲನೆ ನೀಡಿದ್ದು, ಬರೋಬ್ಬರಿ 5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಕ್ವಿನ್ ಸಿಟಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲು ಖಾಸಗಿ ಸಂಸ್ಥೆ ನೇಮಕಕ್ಕೆ ಮುಂದಾಗಿದೆ.
ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ ಕಂಪನಿ. ಅದಕ್ಕೆ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.
ವಕ್ಫ್ ವಿಚಾರವಾಗಿ ಇಲ್ಲಿನ ರೈತರ ಅಹವಾಲು ಕೇಳಬೇಕು ಎಂದು ನಾನು ಬಂದಿದ್ದೇನೆ. ಮುಂಬರುವ ಅಧಿವೇಶದನಲ್ಲಿ ವಕ್ಫ್‌ಗೆ ಸಂಬಂಧಿಸಿದ ಬಿಲ್ ಬರುವುದಿದೆ.