ಬಾಂಗ್ಲಾದೇಶದ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದಬ್ಬಾಳಿಕೆಗಳು ಹಾಗೂ ಹಿಂಸಾಚಾರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ಹಿಂದೂ ಸಮುದಾಯವನ್ನು ಒಗ್ಗಟ್ಟಿನಿಂದ ಬೆಂಬಲಿಸಲು ಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ನಕಲಿ ಅಭ್ಯರ್ಥಿಗಳು ಹಾಜರಾಗುವುದನ್ನು ತಪ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ತಾಂತ್ರಿಕತೆಯ ಮೊಬೈಲ್ ಆಧಾರಿತ ಅಭ್ಯರ್ಥಿ ದೃಢೀಕರಣ ವ್ಯವಸ್ಥೆಯನ್ನು ಶನಿವಾರ ನಡೆದ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬಳಸಿದೆ.
ಜಾತ್ರೆಯ ವೇಳೆ ಎರಡು ತೇರುಗಳು ಮಳೆ, ಗಾಳಿಗೆ ವಾಲಿ ಬಿದ್ದು ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೊಸ್ಕೂರು ಗ್ರಾಮದಲ್ಲಿ ಶನಿವಾರ ನಡೆದಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾನುವಾರದಿಂದ ಮತ್ತಷ್ಟು ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಸಿ ನಿರ್ವಹಿಸಲು ಅಗತ್ಯ ತಾಂತ್ರಿಕ ಹಾಗೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಂಪನಿಯೊಂದಕ್ಕೆ ಕೆಟಿಟಿಪಿ ನಿಯಮ ಗಾಳಿಗೆ ತೂರಿ ಟೆಂಡರ್ ನೀಡಲಾಗಿದ್ದು, ಬೃಹತ್ ಟೆಂಡರ್ ಅಕ್ರಮ ಬಹಿರಂಗಗೊಂಡಿದೆ ಎಂದು ವಿದ್ಯುತ್ ಗುತ್ತಿಗೆದಾರರು ಆರೋಪಿಸಿದ್ದಾರೆ.
ಚಿನ್ನ ಕಳ್ಳ ಸಾಗಣೆ ಸಂಬಂಧ ಡಿಜಿಪಿ ಮಲಮಗಳೂ ಆಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ, ಏಟ್ರಿಯಾ ಹೋಟಲ್ ಮಾಲೀಕರ ಮೊಮ್ಮಗ ತರುಣ್ ರಾಜು ಅವರು 25 ಬಾರಿ ದುಬೈಗೆ ಒಟ್ಟಿಗೆ ಪ್ರಯಾಣಿಸಿದ್ದರು ಎಂಬ ವಿಚಾರ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ತನಿಖೆಯಲ್ಲಿ ಬಯಲಾಗಿದೆ.
ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಅಥವಾ ಸಿಬಿಐ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಮಾಗಡಿ ರಸ್ತೆ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ನೀತಿ-ನಿರ್ಧಾರಗಳನ್ನು ನಿರೂಪಿಸುವ ಮೂರು ದಿನಗಳ ಮಹತ್ವದ ವಾರ್ಷಿಕ ಸಭೆ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ಗೆ ಶುಕ್ರವಾರ ಚಾಲನೆ ದೊರಕಿತು.