ನಾಮಫಲಕದಲ್ಲಿ ಕನ್ನಡ ಕಟ್ಟುನಿಟ್ಟಿನ ಅನುಷ್ಠಾನವಾಗಬೇಕು: ಡಾ. ಪುರುಷೋತ್ತಮ ಬಿಳಿಮಲೆರಾಜ್ಯಾದ್ಯಂತ ಅಂಗಡಿಗಳು, ಉದ್ಯಮ, ಸಂಘ ಸಂಸ್ಥೆ, ಕಚೇರಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗಬೇಕೆಂಬ ಆದೇಶ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸರ್ಕಾರ ಕ್ರಮ ವಹಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.