ರಾಸುಗಳ ಆರೋಗ್ಯ ರಕ್ಷಣೆಗೆ ನಿಯಮಿತ ಲಸಿಕೆ ಅಗತ್ಯದೊಡ್ಡಬಳ್ಳಾಪುರ: ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿನ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಷನ್, ಇಂಟಾಸ್ ಅನಿಮಲ್ ಹೆಲ್ತ್ ಮತ್ತು ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಯೋಗದಲ್ಲಿ ಎಸ್‌ಸಿ-ಎಸ್‌ಪಿ ಪ್ರಾಯೋಜನೆಯ ದತ್ತು ಗ್ರಾಮವಾದ ಹೊಸಹಳ್ಳಿಯಲ್ಲಿ ತರಬೇತಿ ಕಾರ್ಯಕ್ರಮ ಮತ್ತು ಜಾನುವಾರುಗಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.