ಕರ್ನಾಟಕ ಲೋಕಸೇವಾ ಆಯೋಗದ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ 2025ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಡಿಸಿದರು.
ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದ್ದು, ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.
ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಕಲ್ಪಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳಲ್ಲಿ ತಪ್ಪಿ ಹೋಗಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಪತ್ತೆ ಮಾಡಿ, ವರದಿ ನೀಡುವ ಸಲುವಾಗಿ ಐದು ತಂಡ ರಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.