ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಅಗತ್ಯ ಅನುದಾನ: ಶಾಸಕ ಶರತ್ ಬಚ್ಚೇಗೌಡಶಿಕ್ಷಣದ ಮೇಲೆ ದೇಶದ ಅಭಿವೃದ್ಧಿ ಅವಲಂಬಿಸಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಒದಗಿಸುತ್ತೇನೆ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಕಾಲೇಜು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.