ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅ.3ರ ಗುರುವಾರದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.
ಕಳೆದ ಆರೇಳು ತಿಂಗಳಿನಿಂದ ತಾತ್ಕಾಲಿಕವಾಗಿ ನಿಷೇಧಿಸಲಾಗಿದ್ದ ಚಾರಣ ಪ್ರಕ್ರಿಯೆಗೆ ಅರಣ್ಯ ಇಲಾಖೆ ಶುಕ್ರವಾರದಿಂದ ಮತ್ತೆ ಚಾಲನೆ ನೀಡುತ್ತಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಮೂಲಕ ಹೊಸ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.
ಅನರ್ಹ ಪಡಿತರ ಚೀಟಿಗಳನ್ನು ರದ್ದು ಪಡಿಸುವ ಕಾರ್ಯಕ್ಕೆ ವೇಗ ನೀಡಿರುವ ಆಹಾರ ಇಲಾಖೆ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಕುಟುಂಬ ತಂತ್ರಾಂಶದ ಮೊರೆ ಹೋಗಿದ್ದು ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ಅಂತ್ಯೋದಯ, ಬಿಪಿಎಲ್ ಕಾರ್ಡ್‌ಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಿದೆ.
ಧಾರವಾಡ ಸೇರಿ ರಾಜ್ಯದ ಆರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದ್ದು, ನೆರೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ನೀರುಪಾಲಾಗಿದ್ದಾರೆ.