50 ಕೋಟಿ ರು. ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಕ್ರಮ: ಸಚಿವ ಮುನಿಯಪ್ಪದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೫೦ ಕೋಟಿ ರು. ವಿಶೇಷ ಅನುದಾನ ನೀಡಿದ್ದು, ಆದ್ಯತೆ ಮೇಲೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.