ದ್ವಿತೀಯ ಪಿಯು ಪರೀಕ್ಷೆ: ಜಿಲ್ಲೆಯ 17 ಕೇಂದ್ರಗಳು ಸಜ್ಜುದೊಡ್ಡಬಳ್ಳಾಪುರ: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪಬ್ಲಿಕ್ ಪರೀಕ್ಷೆಗಳು ಮಾ.1ರಂದು ಶನಿವಾರದಿಂದ ಆರಂಭಗೊಳ್ಳಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 11,341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಜಿಲ್ಲಾ ಉಪನಿರ್ದೇಶಕ ಎನ್. ಮೋಹನ್ ಕುಮಾರ್ ತಿಳಿಸಿದ್ದಾರೆ.