ದೊಡ್ಡಬಳ್ಳಾಪುರ ಬಳಿ ಜ್ಞಾನ ನಗರಿ: 26ಕ್ಕೆ ಶಿಲಾನ್ಯಾಸಸಿಂಗಪುರದ ಬಯೊಪೊಲೀಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್ ಇನ್ನೋವೇಶನ್ ಕ್ಲಸ್ಟರ್ ಇದಕ್ಕೆ ಮಾದರಿಯಾಗಿದೆ. ಜತೆಗೆ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ. ದೊಡ್ಡಬಳ್ಳಾಪುರ- ದಾಬಸಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿಮೀ ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.