ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗದ ಹಿನ್ನೆಲೆಯಲ್ಲಿ ಎಸ್ಕಾಂಗಳು ಅನಿಯಮಿತ ವಿದ್ಯುತ್ ಕಡಿತದ ಮೊರೆ ಹೋಗಿವೆ. ಪರಿಣಾಮ ರಾಜ್ಯಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಶುರುವಾಗಿದೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್‌ನೋಟ್ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.
ನೀರಿನ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡ-ಬಲದಂಡೆ ಕಾಲುವೆಗಳಿಗೆ ಏ.6ರವರೆಗೆ ನೀರು ಹರಿಸಲು ಗುರುವಾರ ಹೈಕೋರ್ಟ್ ಆದೇಶ ನೀಡಿದೆ.
ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ! ವಕೀಲರಾಗಿ ವಿಚಾರಣೆ ನಡೆಸಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ!