ದುಬೈನಿಂದ ಚಿನ್ನ ಸಾಗಿಸುವ ಮುನ್ನ ತನ್ನ ಗೆಳೆಯ ಹಾಗೂ ಬಳ್ಳಾರಿ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್‌ಗೆ ನಟಿ ರನ್ಯಾ ರಾವ್ ಅವರು ವಾಟ್ಸಪ್‌ನಲ್ಲಿ ಮೆಸೇಜ್ ಮಾಡಿದ್ದರು ಎಂಬ ಸಂಗತಿ ಡಿಆರ್‌ಐ ತನಿಖೆಯಲ್ಲಿ ಪತ್ತೆಯಾಗಿದೆ.
ಮಂಗಳವಾರದಿಂದ ಹಾಲು, ಮೊಸರಿನ ದರ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಹೋಟೆಲ್‌ಗಳಲ್ಲಿ ಚಹ, ಕಾಫಿ ಸೇರಿದಂತೆ ಹಾಲಿನ ಖಾದ್ಯ, ಸಿಹಿ ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಲಿದೆ.
ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜವಹಾರ್‌ಲಾಲ್ ನೆಹರು ತಾರಾಲಯದ ಸ್ಕೈ ಥಿಯೇಟರ್ ಪ್ರವೇಶ ಶುಲ್ಕವೂ ಶೇ.25ರಷ್ಟು ಹೆಚ್ಚಳವಾಗಿದೆ. ವಯಸ್ಕರ ಪ್ರವೇಶಕ್ಕೆ ಹಾಲಿ ದರ ₹75 ರಿಂದ ₹100ಕ್ಕೆ ಏರಿಕೆಯಾಗಿದ್ದು, ಪರಿಷ್ಕೃತ ದರ ಏ.1ರಿಂದಲೇ ಜಾರಿಗೆ ಬರಲಿದೆ.
ಏ.1ರಿಂದ ಹೊಸ ವಿತ್ತೀಯ ವರ್ಷ ಆರಂಭವಾಗಲಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಹಾಕುವ ಕೆಲವು ಕ್ರಮಗಳು ಜಾರಿಗೆ ಬರಲಿವೆ. ಹಾಲು, ಮೊಸರು, ಟೋಲ್ ಶುಲ್ಕ, ಕಾರು ಸೇರಿ ಹಲವು ವಸ್ತು ದುಬಾರಿ ಆಗಲಿವೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸಂಶೋಧನಾ ಚಟುವಟಿಕೆಗಳಿಗಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದಲ್ಲಿ ಐದು ವರ್ಷಗಳಾದರೂ ಸಂಶೋಧನಾ ಚುಟವಟಿಕೆಗಳೇ ಶುರುವಾಗಿಲ್ಲ. ಇದಕ್ಕೆ ಎರಡು ಪ್ರಮುಖ ಕಾರಣಗಳು.