ಇನ್ವೆಸ್ಟ್ ಕರ್ನಾಟಕ : ರಾಜ್ಯಕ್ಕೆ ಬಂತು ₹10.27 ಲಕ್ಷ ಕೋಟಿ ಮೊತ್ತದ ಹೂಡಿಕೆಯ ಘೋಷಣೆನಾಲ್ಕು ದಿನಗಳ ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಒಟ್ಟು 10.27 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 6 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ದೊರೆತಿದೆ. ಆ ಪೈಕಿ 6.23 ಲಕ್ಷ ಕೋಟಿ ರು.ಹೂಡಿಕೆಗೆ ಒಡಂಬಡಿಕೆಯಾಗಿದ್ದರೆ, 4.03 ಲಕ್ಷ ಕೋಟಿ ರು. ಮೊತ್ತದ ಹೂಡಿಕೆಯ ಘೋಷಣೆಯಾಗಿದೆ.