ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ - ಸುಪ್ರೀಂಕೋರ್ಟ್
ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ (ಮೃತನ ಮೊದಲ ಪುತ್ರಿಯ ಪತಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮರಳಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಮಾಜ ಕಲ್ಯಾಣ ಸಚಿವ ಎಚ್.ಡಿ.ಮಹದೇವಪ್ಪ ಗುರುವಾರ ನಗರದಲ್ಲಿ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.
ಮುಂದಿನ ಮೂರು ವರ್ಷಗಳಲ್ಲಿ ಕೃತಕ ಬುದ್ದಿಮತ್ತೆಯ (ಎಐ) ಸ್ವರೂಪ ಹೇಗಿರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ.
ರಾಜ್ಯ ಸರ್ಕಾರ ಕೊಡಮಾಡುವ 2024-25ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಧಾರವಾಡದ ಡಾ। ಎಸ್.ಆರ್.ಗುಂಜಾಳ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಗೆ ಬಾಗಲಕೋಟೆಯ ಬಸಪ್ಪ ಎಚ್.ಭಜಂತ್ರಿ ಅವರು ಭಾಜನರಾಗಿದ್ದಾರೆ.
ಬೆಂಗಳೂರಲ್ಲಿ ನಿರ್ಮಿತವಾಗಿ ಭಾರತೀಯ ಸೈನ್ಯಕ್ಕೆ ಒಪ್ಪಿಸಲಾದ ಈ ಆ್ಯಂಟಿ ಡ್ರೋನ್ ಜಾಮರ್ ಸಂರಕ್ಷಿತ ವಲಯದಲ್ಲಿ ಶತ್ರುಗಳ ಡ್ರೋನ್ ಬರುತ್ತಿದ್ದಂತೆ ಅದನ್ನು ನಿಷ್ಕ್ರಿಯಗೊಳಿಸುತ್ತದೆ. ಇದನ್ನು ತಿಳಿದ ಶತ್ರುಪಾಳಯ ತಮ್ಮ ಡ್ರೋನ್‌ನ್ನು ವಾಪಸ್ ಕರೆಸಿಕೊಳ್ಳಲೂ ಅವಕಾಶ ನೀಡದಂತೆ ಅಲ್ಲಿಯೇ ಬೀಳಿಸುತ್ತದೆ.
ಇಸ್ರೇಲ್‌ನ ವಾಯು ಗಡಿ ರಕ್ಷಣಾ ವ್ಯವಸ್ಥೆ ‘ಐರನ್ ಡೋಮ್’ ಮಾದರಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಹೊಸ ತಲೆಮಾರಿನ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ ‘ರಕ್ಷಕ್’ ಅನ್ನು ಅಭಿವೃದ್ಧಿಪಡಿಸುತ್ತಿದೆ.