ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ: ಸ್ನೇಹಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ತಿಂಗಳ ಸಂಬಳ ಬರುತ್ತದೆ. ಆದರೆ, ರೈತರಿಗೆ ಯಾವ ಸಂಬಳವೂ ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೇ ಶೀಘ್ರವಾಗಿ ಅವರ ಕೆಲಸಕಾರ್ಯಗಳನ್ನು ಮಾಡಿಕೊಡಿ ಎಂದು ಲೋಕಾಯುಕ್ತ ಎಸ್ಪಿ ಸ್ನೇಹ ಸೂಚಿಸಿದರು. ಚನ್ನಪಟ್ಟಣದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.