ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾವು ಜೋರು ಪಡೆಯುತ್ತಿದೆ. ಎಡಗೈ ಸಮುದಾಯಗಳ ಜತೆಗೆ ಪ್ರತಿಪಕ್ಷಗಳೂ ಬೀದಿಗಿಳಿದಿವೆ. ನ್ಯಾ.ನಾಗಮೋಹನ್‌ದಾಸ್ ಆಯೋಗ ವರದಿಯಲ್ಲಿ ಸ್ಪೃಷ್ಯ ಜಾತಿಗಳಿಗೆ ಅನ್ಯಾಯ ಆಗಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ನಿಯೋಗ ಸಿಎಂ ಮೊರೆ ಹೋಗಿದೆ.
79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಾಜಭವನ ವೀಕ್ಷಣೆಗೆ ಆ. 16, 17 ಮತ್ತು 18ರಂದು ಸಂಜೆ 6 ರಿಂದ 7.30 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.
ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಇದೇ 17ರಂದು ಭಾನುವಾರ ಭೇಟಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಐದೂವರೆ ವರ್ಷದಲ್ಲಿ 2,13,192 ಅಪಘಾತಗಳು ಸಂಭವಿಸಿದ್ದು, 60,115 ಜನ ಸಾವಿಗೀಡಾಗಿದ್ದಾರೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇತ್ತೀಚೆಗೆ ಅಪಘಾತ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೂ ಇನ್ನಷ್ಟು ಕಡಿಮೆ ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ