ಚಿನ್ನ ಕಳ್ಳ ಸಾಗಣೆ ಸಂಬಂಧ ಡಿಜಿಪಿ ಮಲಮಗಳೂ ಆಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ, ಏಟ್ರಿಯಾ ಹೋಟಲ್ ಮಾಲೀಕರ ಮೊಮ್ಮಗ ತರುಣ್ ರಾಜು ಅವರು 25 ಬಾರಿ ದುಬೈಗೆ ಒಟ್ಟಿಗೆ ಪ್ರಯಾಣಿಸಿದ್ದರು ಎಂಬ ವಿಚಾರ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ತನಿಖೆಯಲ್ಲಿ ಬಯಲಾಗಿದೆ.
ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಅಥವಾ ಸಿಬಿಐ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಮಾಗಡಿ ರಸ್ತೆ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ನೀತಿ-ನಿರ್ಧಾರಗಳನ್ನು ನಿರೂಪಿಸುವ ಮೂರು ದಿನಗಳ ಮಹತ್ವದ ವಾರ್ಷಿಕ ಸಭೆ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ಗೆ ಶುಕ್ರವಾರ ಚಾಲನೆ ದೊರಕಿತು.
ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವ ಮುನ್ನವೇ ದಾಖಲೆಗಳ ಸಂಗ್ರಹಣೆ ಮಾಡುವುದು ಈ ಕುರಿತ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯದಲ್ಲಿ ಇನ್ನು ಮುಂದೆ ರಸ್ತೆಗಿಳಿಯುವ 25 ಲಕ್ಷ ರು.ಮೀರಿದ ವಿದ್ಯುತ್‌ಚಾಲಿತ ಕ್ಯಾಬ್‌ಗಳಿಗೆ ಶೇ.10ರಷ್ಟು ಹಾಗೂ ಹತ್ತು ಲಕ್ಷ ರು.ವರೆಗಿನ ಕ್ಯಾಬ್‌ಗಳಿಗೆ ಶೇ.5ರಷ್ಟು ತೆರಿಗೆ ವಿಧಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಎಸ್ಕಾಂಗಳು ಕೆಟಿಟಿಪಿ ಕಂಪೆನಿಯ ಜೇಬು ತುಂಬಿಸಲು ಸ್ಮಾರ್ಟ್ ಮೀಟರ್ ಖರೀದಿ ಹಾಗೂ ನಿರ್ವಹಣೆಗೆ ದುಬಾರಿ ದರ ನಿಗದಿ ಮಾಡಿವೆ. ಪರಿಣಾಮ ಎಸ್ಕಾಂಗಳು ಹಾಗೂ ಸಾರ್ವಜನಿಕರಿಗೆ ಸೇರಿದ ಬರೋಬ್ಬರಿ 15,568 ಕೋಟಿ ರು. ಹಣ ಲೂಟಿಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.