ನಗರದಲ್ಲಿ ಸಂಭ್ರಮದ ಚತುರ್ಥಿ ಆಚರಣೆರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಹಬ್ಬ ಕಳೆಗಟ್ಟಿದ್ದು, ಮನೆಮನೆಗಳು, ಬಡಾವಣೆಗಳ ಗಲ್ಲಿಗಲ್ಲಿಗಳಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ ಭಕ್ತಿಭಾವದಿಂದ ಪೂಜಿಸಲಾಗುತ್ತಿದೆ. ಇಲ್ಲಿನ ದೊಡ್ಡಗಣಪತಿ ದೇವಸ್ಥಾನ ಸೇರಿ ಪ್ರಮುಖ ಗಣೇಶ ದೇವಾಲಯಗಳಲ್ಲೂ ವಿಶೇಷ ಪೂಜೆ, ಹೋಮ ಹವನಾದಿಗಳು ನಡೆಯುತ್ತಿವೆ.