ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಎಲಗಿರಿಯಲ್ಲಿರುವಂತೆ ರಾಜ್ಯದ ಎರಡು ಕಡೆಗಳಲ್ಲಿ ಪಕ್ಷಿ ಪ್ರಪಂಚ ಸೃಷ್ಟಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ.
ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗೌರಿ ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದಂತೆ, ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ಭರ್ಜರಿ ಮಾರಾಟವಾಗುತ್ತಿದೆ.
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುಂದಿನ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವರ್ಚುವಲ್ ಮೂಲಕ ಚಾಲನೆ ನೀಡಿದ ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲನ್ನು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸ್ವಾಗತಿಸಿದರು.
ಪ್ರತಿಭಾ ಕಾರಂಜಿಯು ಕನಕಪುರದ ಕೋಡಿಹಳ್ಳಿ ಹೋಬಳಿಯ ಬನ್ನಿಮುಕ್ಕೋಡ್ಲು ಪ್ರೌಢಶಾಲಾ ಆವರಣದಲ್ಲಿ ನಡೆಯಿತು.