ವಿಧಾನಸೌಧದ ಸಚಿವಾಲಯದ ಭದ್ರತಾ ವ್ಯವಸ್ಥೆಯನ್ನು ಪರಿಷ್ಕರಿಸಿ ಮುಖ್ಯ ಭದ್ರತಾ ಅಧಿಕಾರಿ ಹುದ್ದೆ ರದ್ದುಪಡಿಸಿದ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳು ಪತ್ರ ಬರೆದು ತೀವ್ರ ಅಸಮಾಧಾನ
ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಕಾನ್‌ಸ್ಟೇಬಲ್‌ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.3ಕ್ಕೆ ಹೆಚ್ಚಿಸುವ ಜೊತೆಗೆ ಡಿವೈಎಸ್‌ಪಿ ಹುದ್ದೆಗೆ ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ದೇವಾಂಗ ಸಮುದಾಯದ ಶೇ.80 ಹೆಚ್ಚಿನ ಜನರು ಇಂದಿಗೂ ನೇಕಾರಿಕೆಯನ್ನೇ ಅವಲಂಬಿಸಿದ್ದಾರೆ. ಕೊರೋನಾ ಬಳಿಕ ಇವರ ನೇಕಾರಿಕೆ ಉದ್ಯಮ ಸಂಪೂರ್ಣ ನೆಲಕಚ್ಚಿದ್ದು, ಶೇ.80ರಷ್ಟು ಕೈಮಗ್ಗಗಳು ಕಣ್ಮರೆ-ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಾವರದಿಯೊಂದು ತಿಳಿಸಿದೆ.
ಪ್ರಯಾಗ್‌ರಾಜನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟಿರುವ ಬೆಳಗಾವಿ ಮೂಲದ ನಾಲ್ವರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ಪುಣ್ಯಸ್ನಾನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ ಬೆಳಗಾವಿಯ ನಾಲ್ವರ ಪೈಕಿ ಇಬ್ಬರ ಮೃತದೇಹಗಳನ್ನು ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ 6.20ಕ್ಕೆ ತೆಗೆದುಕೊಂಡು ಬರಲಾಯಿತು.
ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ್ದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಜೊತೆಗೆ ಕನ್ನಡ ಪ್ರಶ್ನೆ ಪತ್ರಿಕೆಯ ಲೋಪದೋಷಗಳಿಗೆ ಒಟ್ಟು 5 ಕೃಪಾಂಕ ನೀಡಿದೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮದ ಬಸವೇಶ್ವರನಗರ ನಿವಾಸಿ ಸುಬ್ರಹ್ಮಣ್ಯ (37), ಬೆಳಗಾವಿ ಜಿಲ್ಲೆ ಬೈಲಹೊಂಗಲದ ರಫೀಕ್ ತಿಗಡಿ (38) ಎಂಬುವರು ಸಾವಿಗೆ ಶರಣಾಗಿದ್ದಾರೆ.