-ಮೈಕ್ರೋಫೈನಾನ್ಸ್ ವ್ಯವಹಾರದಲ್ಲಿ ರಿಸ್ಕ್ ಜಾಸ್ತಿ । ಇಲ್ಲಿ ‘ನಂಬಿಕೆ ಮತ್ತು ವಿಶ್ವಾಸ’ವೇ ಸಾಲಕ್ಕೆ ಆಧಾರ । ಹೀಗಾಗಿ ಇಲ್ಲಿ ನಿಯಮಗಳು ಕಾಗದಕ್ಕಷ್ಟೇ ಸೀಮಿತ । ಸಾಲ ವಸೂಲಿಗೆ ರೌಡಿಗಳ ಬಳಕೆ ಸಲ್ಲ । ಇದರ ವಿರುದ್ಧ ಪೊಲೀಸರಿಗೆ ದೂರು ಕೊಡಲು ಅವಕಾಶ । ಲೇವಾದೇವಿದಾರರ ಸಂಘ ಅಧ್ಯಕ್ಷ ಜಯರಾಮ ಸೂಡ
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತ ನ್ಯಾಯಾಧಿಕರಣದ ಅಂತಿಮ ಆದೇಶ ಹೊರಡಿಸಿ ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವುದು ಹಾಗೂ ಮೇಕೆದಾಟು ಸಮಗ್ರ ಯೋಜನಾ ವರದಿ, ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ಕೊಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಅನಧಿಕೃತ ಬಡಾವಣೆಗಳ ನಿವೇಶನಗಳಿಗೆ ಯಾವುದೇ ಕಾರಣಕ್ಕೂ ಖಾತಾ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ। ಚಂದ್ರಶೇಖರ ಕಂಬಾರ ಸೇರಿ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.
ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನೂ ಸೇರಿಸಿ ಅಂಗಾಂಗ ಕಸಿ ಯೋಜನೆಯನ್ನು ವಿಸ್ತರಿಸಲು ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಆರ್‌ಟಿಜಿಎಸ್ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ₹33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಈ ಘಟನೆ ಜ.24, 27ರಂದು ನಡೆದಿದೆ ಎಂದು ಅಂದಾಜಿಸಲಾಗಿದೆ.
ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದಾರೆನ್ನಲಾದ ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದಾರೆನ್ನಲಾದ 14 ಎಕರೆ ಸರ್ಕಾರಿ ಜಮೀನು ಎರಡು ವಾರದಲ್ಲಿ ತೆರವಾಗುವಂತೆ ಕ್ರಮ
ರಾಜಧಾನಿಯ ಅರಮನೆ ಜಾಗವನ್ನು ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಬಿಡುವುದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸಂಬಂಧಪಟ್ಟ ವಿಚಾರ ಎಂದು ಹೇಳುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸಹಿ ಹಾಕಿದ್ದಾರೆ.
ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ಧಪಡಿಸಲಾಗಿದ್ದು, ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.