ವಿದ್ಯುತ್ ಹೊಸ ಸಂಪರ್ಕಗಳಿಗೆ ಗೃಹಜ್ಯೋತಿ ಯೋಜನೆಯಡಿ 58 ಯುನಿಟ್ ಉಚಿತ್ ವಿದ್ಯುತ್ ನೀಡುತ್ತಿದ್ದು, ಒಂದು ವರ್ಷದ ನಂತರ ಹೊಸ ಸರಾಸರಿ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಚಾಲನೆ ನೀಡಿದರು.
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರಾಮನಗರ ಜಿಲ್ಲೆಯ ತಿಮ್ಮಯ್ಯನದೊಡ್ಡಿಯಲ್ಲಿ ಮಹಿಳೆಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಮಾಸುವ ಬೆನ್ನಲ್ಲೆ ಅಂತಹದ್ದೆ ಘಟನೆ ಚನ್ನಪಟ್ಟಣ ತಾಲೂಕಿನ ಮೈಲನಾಯ್ಕನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ನಿವೃತ್ತ ಸಹಾಯಕ ಆಡಳಿತಾಧಿಕಾರಿ ವೈ.ವೈ. ಬಗಲಿ ಅವರು ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರೇ ಎಂಬ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚಿಸಿದೆ.
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈವರೆಗೆ 1.50ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ.
ಸಾಂವಿಧಾನಿಕವಾಗಿ ಪುರುಷರಷ್ಟೇ ಸಮಾನ ಹಕ್ಕುಗಳು ಮಹಿಳೆಯರಿಗೆ ಇವೆ. ಆದರೆ ವಾಸ್ತವವಾಗಿ ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ. ಹಾಗಾಗಿ, ಸದ್ಯ ಲಿಂಗ ತಾರತಮ್ಯವಿಲ್ಲದ ಸಮಾಜದ ಅಗತ್ಯ ತುರ್ತಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತ ಹಾವೇರಿಯ ಮಹಿಳೆಯರು ಇದೀಗ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಅವರು ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಸ್ಟ್ ಮೂಲಕ ತಾಳಿ ಸರ ರವಾನಿಸಿದ್ದಾರೆ.