ರಾಜ್ಯ ಸರ್ಕಾರಗಳಿಗೆ ಜಿಎಸ್‌ಟಿ ಸಂಕಷ್ಟ: ಕೃಷ್ಣ ಬೈರೇಗೌಡಜಿಎಸ್ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.