ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾದ ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್‌ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ.
ಹಾಲು ಉತ್ಪಾದನೆ ವೆಚ್ಚ ಹೆಚ್ಚಳ ಹಿನ್ನೆಲೆಯಲ್ಲಿ ರೈತರು ಹಾಲಿನ ಖರೀದಿ ದರವನ್ನು 10 ರು.ನಷ್ಟು ಹೆಚ್ಚಿಸುವಂತೆ ಬೇಡಿಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಿಸುವ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ರಾಜ್ಯದ ಜನರ ಬೆಚ್ಚಿ ಬೀಳಿಸಿದ್ದ ಬೀದರ್‌ನಲ್ಲಿ ನಡೆದ ಎಟಿಎಂಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ಹಣ ದರೋಡೆ, ಮಂಗಳೂರು ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂಲಿಬೆಲೆಯಲ್ಲಿ ಬಾಲಿವುಡ್ ಸ್ಟೈಲ್‌ನಲ್ಲಿ ಎಟಿಎಂ ಕಳ್ಳತನ ನಡೆದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್‌ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್‌ಸೆಟ್‌ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.