ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಶರಣಾಗಿರುವ ನಕ್ಸಲರು ಸರ್ಕಾರದ ಮುಂದೆ 18 ಅಂಶಗಳ ಹಕ್ಕೊತ್ತಾಯ ಮಂಡಿಸಿದ್ದಾರೆ.
ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಕೆ ಆರೋಪದ ಮೇಲೆ ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, 21.05 ಕೋಟಿ ರು. ಮೊತ್ತದ ನಗದು, ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಕುಲಪತಿಗಳ ನೇಮಕಾತಿಗೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯಗಳ ಅಧಿಕಾರ ಕಸಿಯಲು ಹೊರಟಿರುವ ಕೇಂದ್ರದ ಕ್ರಮ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.
ಆಧುನಿಕತೆಗನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಸೇರಿ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ‘ಗರುಡಾಕ್ಷಿ’ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹೋಟೆಲ್ ಉದ್ಯಮದಲ್ಲಿ ನಷ್ಟವಾಗಿ, ಸಾಲ ತೀರಿಸಲು ತಂದೆ ಹೆಸರಲ್ಲಿ ಇನ್ಶೂರೆನ್ಸ್ ಮಾಡಿಸಿ, ತಂದೆಯನ್ನೇ ಕೊಂದು, ಅಪಘಾತದ ಕಥೆ ಕಟ್ಟಿ ಓಡಾಡಿಕೊಂಡಿದ್ದ ಮಗನನ್ನು ಕಲಬುರಗಿಯ ಮಾಡಬೂಳ ಠಾಣಾ ಪೊಲೀಸರು ಬಂಧಿಸಿದ್ದಾರೆ.