ಕೋಟಿ ಕೋಟಿ ಅನುದಾನ ಇದ್ದರೂ ಖರ್ಚು ಮಾಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡಲೇ ನೋಟಿಸ್ ನೀಡಿ, ಉತ್ತರ ಸಮರ್ಪಕವಾಗಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಮುಖ್ಯ ಕಾರ್ಯದರ್ಶಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಡಾಟಾಕ್ವೆಸ್ಟ್ ನೀಡುವ ‘ಐಟಿ ವರ್ಷದ ವ್ಯಕ್ತಿ-2023’ಗೆ ಭಾಜನರಾಗಿದ್ದಾರೆ.
ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್‌ಎಂಪಿವಿ) ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು ಎರಡು ದಶಕಗಳ ಕಾಲ ಬಂದೂಕು ಹಿಡಿದು ಹೋರಾಟ ನಡೆಸಿದ್ದ 6 ಮಂದಿ ನಕ್ಸಲರು ಬುಧವಾರ ಶರಣಾಗತಿಗೆ ಸಮ್ಮತಿಸಿದ್ದಾರೆ.
ರಾಜ್ಯದಲ್ಲಿ ಎಚ್ಎಂಪಿವಿ ಸೋಂಕು ದೃಢಪಟ್ಟ ಬೆನ್ನಲ್ಲೇ ಎಚ್‌ಎಂಪಿವಿ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.
ಸಂಸದ ತೇಜಸ್ವಿ ಸೂರ್ಯ ಅವರ ಕಾರ್ಯದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ತೇಜಸ್ವಿ ಅವರನ್ನು ‘ಮೆಟ್ರೋ ಮಿತ್ರ’ ಎಂದು ಕರೆದು ಪ್ರಶಂಸಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ ಶೇ.60 ಕಮಿಷನ್ ಸುಲಿಗೆ ಮಾಡುತ್ತಿದೆ ಎಂಬ ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಆಧಾರ ಇಲ್ಲದೆ ಆರೋಪ ಮಾಡುವ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ ಎಂದು ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌ಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಚು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಯಾವ ದಾಖಲೆ ನೀಡಿತ್ತು ಎಂದು ಪ್ರಶ್ನಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘಧ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಎಚ್ಎಂಪಿವಿ ಎಂಬುದು ಪ್ರತಿ ವರ್ಷ ಸಾಮಾನ್ಯವಾಗಿ ಹರಡುವ ಸಹಜ ಸೋಂಕು. ಮಾರಣಾಂತಿಕ ಅಥವಾ ಅಪಾಯಕಾರಿ ವೈರಸ್ ಅಲ್ಲ