ರಾಜಧಾನಿಯಲ್ಲಿ ಭಾರಿ ಮಳೆ: 20 ಮರಗಳು ಧರೆಗೆರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.