ಮಹಾ ಶಿವರಾತ್ರಿ ಪ್ರಯುಕ್ತ ಆರ್ಟ್ ಆಫ್ ಲಿವಿಂಗ್‌ನಲ್ಲಿ ರವಿಶಂಕರ ಗುರೂಜಿ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನಡೆಯಲಿದ್ದು, ವಿಶೇಷವಾಗಿ ಒಂದು ಸಾವಿರ ವರ್ಷಗಳ ಬಳಿಕ ಪುರಾತನ ಸೋಮನಾಥ ಜ್ಯೋತಿರ್ಲಿಂಗವನ್ನು ಭಕ್ತರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ ತಟ್ಟೆ ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯರನ್ನು ಸೋಮವಾರ ಬದಲಾಯಿಸಲಾಗಿದೆ.
ಬಸ್ ನಿರ್ವಾಹಕನ ಮೇಲೆ ಬೇಕೆಂತಲೇ ಪೋಕ್ಸೋ ಪ್ರಕರಣ ಕುರಿತು ದೂರು ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕು ವ್ಯಾಪ್ತಿಯ 5,678.32 ಎಕರೆ ಹುಲ್ಲುಗಾವಲು ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ನಿಗದಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.
ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ತೆರೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸೋಮವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡವು (ಸಿಎಂಆರ್‌ಎಸ್) ಈ ಮಾರ್ಗಕ್ಕಾಗಿ ಚೀನಾದ ಸಿಆರ್‌ಆರ್‌ಸಿ ಕಂಪನಿ ಪೂರೈಸಿರುವ ಚಾಲಕ ರಹಿತ ರೈಲಿನ ಶಾಸನಬದ್ಧ ತಪಾಸಣೆ ನಡೆಸಿದೆ.
ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 231 ಶಾಲಾ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಪ್ರಕರಣ ದಾಖಲಿಸಿದ್ದು, 65 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.
ವಿದ್ಯುತ್ ಸಂಪರ್ಕ ಹಠಾತ್ ಕಡಿತಗೊಂಡ ಪರಿಣಾಮ ಸ್ಕೈವಾಕ್‌ನ ಲಿಫ್ಟ್‌ನಲ್ಲಿ ಸಿಲುಕಿ ಆತಂಕಕ್ಕೊಳಗಾಗಿದ್ದ ಮಹಿಳೆಯೊಬ್ಬರನ್ನು ಚಂದ್ರಾಲೇಔಟ್ ಠಾಣೆ ಹೊಯ್ಸಳ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ.
ಪತ್ನಿ ನಡತೆ ಬಗ್ಗೆ ಸಾರ್ವಜನಿಕರ ಮುಂದೆ ಕೀಳಾಗಿ ಮಾತನಾಡಿದವನನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದ ಪ್ರಕರಣದಲ್ಲಿ ಪತಿ ಜೀವನವಿಡೀ ಜೈಲಿನಲ್ಲಿ ಕೊಳೆಯುವ ಪರಿಸ್ಥಿತಿಯಿಂದ ಹೈಕೋರ್ಟ್ ಪಾರು ಮಾಡಿದೆ.