ರಾಜ್ಯ ಉಪ ನೋಂದಣಿ ಅಧಿಕಾರಿ ಹಾಗೂ ಸಿಬ್ಬಂದಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.27 ರಿಂದ ರಾಜ್ಯಾದ್ಯಂತ ಆಸ್ತಿ ದಸ್ತಾವೇಜು ನೋಂದಣಿ ಸೇರಿ ಎಲ್ಲಾ ಸೇವೆಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧಾರ ಮಾಡಿದ್ದಾರೆ.
ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮುಡಾ ಸೈಟ್ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್ ರದ್ದು ಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ
61 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 1,292.50 ಕೋಟಿ ರು. ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸುವುದು, 63 ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಸೇರಿ ಹಲವು ಯೋಜನೆಗಳಿಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ
ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರನ್ನಾಗಿ ಹಿರಿಯ ಐಎಫ್‌ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ
ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ-ಮಾರ್ಚ್‌ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.